ನಮ್ಮ ಬಗ್ಗೆ

ಹಿನ್ನೆಲೆ

ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆ, ಮೂಲ ವಿಜ್ಞಾನಕ್ಕೆ ಉತ್ತೇಜನ ಹಾಗೂ ವಿದ್ಯಾರ್ಥಿಗಳಲ್ಲಿ ಮತ್ತು ಜನಸಾಮಾನ್ಯರಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯನ್ನು ಜುಲೈ 30, 2005 (ಸರ್ಕಾರಿ ಆದೇಶ ಸಂಖ್ಯೆ: ವಿಯಇ 70 ವಿತ್ರಮ 2004)ರಂದು ಪ್ರಸಿದ್ಧ ಬಾಹ್ಯಾಕಾಶ ವಿಜ್ಞಾನಿ ದಿವಂಗತ ಪ್ರೊ. ಯು. ಆರ್. ರಾವ್‍ರವರ ಅಧ್ಯಕ್ಷತೆಯಲ್ಲಿ ಸರ್ಕಾರವು ಸ್ಥಾಪಿಸಿತ್ತು. ಪ್ರಸ್ತುತ ಅಕಾಡೆಮಿಯು ಪ್ರಮುಖ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು/ ಕಾರ್ಯದರ್ಶಿಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪರಿಣತರನ್ನೊಳಗೊಂಡ ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಸದಸ್ಯರನ್ನು ಹೊಂದಿದೆ.
ಅಕಾಡೆಮಿಯು, ರಾಜ್ಯದೆಲ್ಲೆಡೆ ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಜನಪ್ರಿಯಗೊಳಿಸುವ ಮತ್ತು ಈ ಕ್ಷೇತ್ರಗಳಲ್ಲಾದ ಪ್ರಗತಿಯ ಬಗ್ಗೆ ತಿಳುವಳಿಕೆ ನೀಡುವ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.
ಸರ್ಕಾರವು ಅಕಾಡೆಮಿಯನ್ನು ಕರ್ನಾಟಕ ಸಂಘ ನೊಂದಾವಣಿ ಕಾಯಿದೆ 1960 ರಡಿಯಲ್ಲಿ ಏಪ್ರಿಲ್ 06, 2009 ರಂದು ನೊಂದಾಯಿಸಿರುತ್ತದೆ.

ಸದಸ್ಯರು

ಅಕಾಡೆಮಿಯು ಒಟ್ಟು 18 ಸದಸ್ಯರನ್ನು ಹೊಂದಿದೆ (13 ನಾಮನಿರ್ದೇಶಿತ ಸದಸ್ಯರು ಮತ್ತು 05 ಪದನಿಮಿತ್ತ ಸದಸ್ಯರು)

ಸರ್ಕಾರದ ಪದನಿಮಿತ್ತ ಸದಸ್ಯರು

ಶ್ರೀ ಐ.ಎಸ್.ಎನ್. ಪ್ರಸಾದ್ ಭಾಆಸೇ

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ

ಡಾ. ಇ ವಿ ರಮಣ ರೆಡ್ಡಿ ಭಾಆಸೇ

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಮಾಹಿತಿ ತಂತ್ತಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ

ಡಾ. ರಾಜಕುಮಾರ್ ಖತ್ರಿ ಭಾಆಸೇ

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ

ಶ್ರೀ ಹೆಚ್.ಎನ್. ಗೋಪಾಲಕೃಷ್ಣ

ನಿರ್ದೇಶಕರು, ಡಿ.ಎಸ್.ಇ.ಆರ್.ಟಿ.

ಡಾ. ಹೆಚ್. ಹೊನ್ನೇಗೌಡ

ವಿಶೇಷ ಕಾರ್ಯದರ್ಶಿಗಳು (ತಾಂತ್ರಿಕ), ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ

ನಾಮನಿರ್ದೇಶಿತ ಸದಸ್ಯರು

ಪ್ರೊ. ಪಿ.ಎಸ್.ಶಂಕರ್ ಎಫ್.ಆರ್.ಸಿ.ಪಿ

ಎಮರಿಟಸ್ ಪ್ರೊಫೆಸರ್ ಆಫ್ ಮೆಡಿಸಿನ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ, ಕಲಬುರಗಿ

ಪ್ರೊ. ರಾಮಲಿಂಗಯ್ಯ

ನಿರ್ದೇಶಕರು, ಪಿ.ಇ.ಎಸ್. ವಿದ್ಯಾಸಂಸ್ಥೆ, ಮಂಡ್ಯ

ಪ್ರೊ. ಚಿದಾನಂದ ಗೌಡ

ವಿಶ್ರಾಂತ ಕುಲಪತಿಗಳು, ಕುವೆಂಪು ವಿಶ್ವವಿದ್ಯಾನಿಲಯ, ಶಿವಮೊಗ್ಗ

ಪ್ರೊ. ಗೀತಾಬಾಲಿ

ವಿಶ್ರಾಂತ ಕುಲಪತಿಗಳು, ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ, ಬಿಜಾಪುರ

ಡಾ. ಎಚ್. ಎಸ್. ನಾಗರಾಜ

ಸಂಸ್ಥಾಪಕ ನಿರ್ದೇಶಕರು, ಬೇಸ್ ಇನ್ಸ್ಟಿಟ್ಯೂಟ್, ಬೆಂಗಳೂರು

ಪ್ರೊ.ಸುಧೀಂದ್ರ ಹಾಲ್ದೋಡ್ಡೇರಿ

ವಿಜ್ಞಾನ ಸಂವಹನಕಾರರು, ನಿವೃತ್ತ ವಿಜ್ಞಾನಿ, ಡಿ.ಆರ್.ಡಿ.ಓ., ಬೆಂಗಳೂರು

ಪ್ರೊ. ಕೆ. ಎಂ. ಕಾವೇರಿಯಪ್ಪ

ವಿಶ್ರಾಂತ ಕುಲಪತಿಗಳು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳೂರು

ಡಾ. ವಸುಂದರಾ ಭೂಪತಿ

ಅಧ್ಯಕ್ಷರು, ಕರ್ನಾಟಕ ರಾಜ್ಯ ಪುಸ್ತಕ ಪ್ರಾಧಿಕಾರ, ಬೆಂಗಳೂರು

ಡಾ. ಸೈಯದ್ ಶಕೀಬ್ ಉರ್ ರಹಮಾನ್

ನಿವೃತ್ತ ಪ್ರಾಂಶುಪಾಲರು, ಶ್ರೀ ಜಯಚಾಮರಾಜೇಂದ್ರ ಕಾಲೇಜ್ ಆಫ್ ಇಂಜಿನಿಯರಿಂಗ್, ಮೈಸೂರು

ಪ್ರೊ. ಕೆ. ಎಸ್. ನಟರಾಜ್

ನಿವೃತ್ತ ಉಪ ಪ್ರಾಂಶುಪಾಲರು, ದಿ ನ್ಯಾಷನಲ್ ಕಾಲೇಜು, ಜಯನಗರ, ಬೆಂಗಳೂರು

ಶ್ರೀ ಸ. ರ. ಸುದರ್ಶನ

ನಿವೃತ್ತ ಉಪ ನಿರ್ದೇಶಕರು, ಪ್ರಸಾರಂಗ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು

ಡಾ. ಎಸ್. ಎ. ಪಾಟೀಲ್

ವಿಶ್ರಾಂತ ಕುಲಸಚಿವರು, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯ, ಬಳ್ಳಾರಿ