ವಿಜ್ಞಾನ ಮೇಳ

ಉದ್ದೇಶ

  • ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸುವುದು.
  • ಪ್ರಚಲಿತ ವೈಜ್ಞಾನಿಕ ವಿದ್ಯಮಾನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವುದು

ಕಾರ್ಯಕ್ರಮ

  • ಪ್ರತಿ ಜಿಲ್ಲೆಯಲ್ಲಿ ಆಯ್ದ ವಿಜ್ಞಾನ ಪದವಿ ಕಾಲೇಜಿನ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಸುತ್ತಮುತ್ತಲಿನ ಪದವಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಹಾಗೂ ಅಧ್ಯಾಪಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು.
  • ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸಲು ಹಾಗೂ ಸೃಜನಾತ್ಮಕತೆಗೆ ಪ್ರೋತ್ಸಾಹ ನೀಡಲು ಕೇಂದ್ರ ವಿಷಯಕ್ಕೆ ಸಂಬಂಧಿಸಿದ ಮಾಡಲ್/ಪೇಟಿಂಗ್/ಚಿತ್ರಕಲೆ, ಪ್ರಬಂಧ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು.
  • ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದ ಎರಡು ವಿಶೇಷ ಉಪನ್ಯಾಸಗಳನ್ನು ಸಹ ಆಯೋಜಿಸುವುದು.