ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

2019ರ ಡಿಸೆಂಬರ್ ಮಾಹೆಯಲ್ಲಿ ನಡೆಸಲಾಗುತ್ತಿದೆ

ಉದ್ದೇಶಗಳು

  • ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಯಗೊಳಿಸುವುದು.
  • ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಾಗುತ್ತಿರುವ ಸಂಶೋಧನೆಗಳು ಮತ್ತು ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸುವುದು.
  • ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ವಿವಿಧ ಕ್ಷೇತ್ರಗಳಲ್ಲಿ ಬಳಸಿಕೊಳ್ಳುವ ಬಗ್ಗೆ ತಿಳುವಳಿಕೆ ನೀಡುವುದು.
  • ಜನಸಾಮಾನ್ಯರಲ್ಲಿ ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವುದು.
  • ಜನಸಾಮಾನ್ಯರಲ್ಲಿ ಆಧುನಿಕ ವೈಜ್ಞಾನಿಕ ಸಂಶೋಧನೆಗಳ ಬಗ್ಗೆ ಅರಿವು ಮೂಡಿಸುವುದು.

ಕಾರ್ಯಕ್ರಮ

ಖ್ಯಾತ ಸಂಪನ್ಮೂಲ ತಜ್ಞರುಗಳಿಂದ ಕನ್ನಡದಲ್ಲಿ ಪಾಂಡಿತ್ಯಪೂರ್ಣ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ಅಲ್ಲದೆ, ಸಮ್ಮೇಳನದಲ್ಲಿ ವಿಜ್ಞಾನ ವಿಷಯಗಳಲ್ಲಿ ವಿಚಾರ ಗೋಷ್ಠಿಗಳನ್ನು ಮತ್ತು ಕನ್ನಡದಲ್ಲಿ ವಿಜ್ಞಾನ ಕವಿತೆಗಳ ವಾಚನಕ್ಕೆ ಒಂದು ಕವಿ ಗೋಷ್ಠಿಯನ್ನು ಸಹ ಆಯೋಜಿಸಲಾಗುವುದು.

ಪ್ರಾತ್ಯಕ್ಷಿಕೆಗಳ ಪ್ರಸ್ತುತಿ

ಪ್ರತಿನಿಧಿಗಳು ತಮ್ಮ ಸಂಶೋಧನಾ ಫಲಿತಾಂಶವನ್ನು ಕನ್ನಡದಲ್ಲಿ ಪ್ರಾತ್ಯಕ್ಷಿಕೆಗಳ ಮೂಲಕ ಪ್ರಸ್ತುತ ಪಡಿಸಲು ಸಮ್ಮೇಳನವು ಒಂದು ವೇದಿಕೆಯನ್ನು ಕಲ್ಪಿಸಿದೆ. ಮೂಲ ಮತ್ತು ಅನ್ವಯಿಕ ವಿಜ್ಞಾನಗಳಿಗೆ ಸಂಬಂಧಿಸಿದ ಯಾವುದೇ ವಿಷಯದ ಪ್ರಾತ್ಯಕ್ಷಿಕೆಗಳನ್ನು ಯುವ ವಿಜ್ಞಾನಿಗಳು/ ಸಂಶೋಧಕರು, ಅಧ್ಯಾಪಕರು, ಇಲಾಖಾ ಪ್ರತಿನಿಧಿಗಳು ಮತ್ತು ಸ್ನಾತಕೋತ್ತರ / ಸಂಶೋಧನಾ ವಿದ್ಯಾರ್ಥಿಗಳು ಮಂಡಿಸಬಹುದಾಗಿದೆ. ವೈಜ್ಞಾನಿಕ ಸಂಶೋಧನೆಗಳಿಗೆ ಪ್ರೋತ್ಸಾಹವನ್ನು ನೀಡುವ ಸಲುವಾಗಿ ಅತ್ಯುತ್ತಮ ಪ್ರಾತ್ಯಕ್ಷಿಕೆಗಳಿಗೆ ಬಹುಮಾನವನ್ನು ನೀಡಲಾಗುವುದು

ಈ ವರ್ಷದ ಸಮ್ಮೇಳನವನ್ನು ವಿಜಯಪುರದಲ್ಲಿ ಎಸ್. ಬಿ. ಕಲೆ ಮತ್ತು ಕೆ.ಸಿ.ಪಿ. ವಿಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ 2019ರ ಡಿಸೆಂಬರ್ ಮಾಹೆಯಲ್ಲಿ ನಡೆಸಲಾಗುತ್ತಿದೆ.